ಬೆಂಗಳೂರು: ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡಲಾಗುವ ಸಹಾಯಧನದ ಮೊತ್ತವನ್ನು ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲಾಖೆಯ ಅಧಿಕಾರಿಗಳ ಜತೆ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ (ಎಸ್ಸಿ) ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ತಲಾ ₹ 1.70 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಉತ್ತಮವಾದ ಮನೆ ನಿರ್ಮಾಣ ಅಸಾಧ್ಯ. ಆದ್ದರಿಂದ ಸಹಾಯಧನದ ಮೊತ್ತವನ್ನು ₹ 5 ಲಕ್ಷಕ್ಕೆ ಏರಿಕೆ ಮಾಡಲಾಗುವುದು’ ಎಂದರು.

ಸಹಾಯಧನ ಹೆಚ್ಚಳದಿಂದ ಉಂಟಾಗುವ ಹೊರೆಯನ್ನು ಭರಿಸುವುದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಂದು ವರ್ಷದ ಅವಧಿಗೆ ಅನಗತ್ಯ ವೆಚ್ಚ ಮತ್ತು ಅನಿವಾರ್ಯವಲ್ಲದ ಯೋಜನೆಗಳಿಗೆ ಕಡಿವಾಣ ಹಾಕಲಾಗುವುದು. ಪರಿಶಿಷ್ಟ ಜಾತಿಯ ಜನರಿಗೆ ವಸತಿ,ಶೌಚಾಲಯ, ಶುದ್ಧ ಕುಡಿಯುವ ನೀರು, ಉತ್ತಮವಾದ ಆರೋಗ್ಯ ಸೌಲಭ್ಯ ಹಾಗೂ ಶಿಕ್ಷಣಕ್ಕೆ ನೆರವು ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.