ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ದೇಗುಲಗಳ ಹಣ ಅನ್ಯ ಉದ್ದೇಶಕ್ಕೆ ಬಳಕೆ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಹಿಂದೂ ದೇಗುಲಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ
Last Updated 9 ಜೂನ್ 2021, 21:47 IST
ಅಕ್ಷರ ಗಾತ್ರ

ಮಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ತಸ್ತೀಕ್‌ ಹಣವನ್ನು ಹಿಂದೂ ಧರ್ಮ ಹೊರತುಪಡಿಸಿ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ನೀಡುವುದನ್ನು ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ ಅದು ಆಯಾ ಇಲಾಖೆಯ ಜವಾಬ್ದಾರಿ. ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗು ವುದು ಎಂದು ತಿಳಿಸಿದ್ದಾರೆ.

‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಯಲ್ಲಿನ ಅನುದಾನ, ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿತ್ತು’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸರ್ಕಾರ ಸುಮಾರು ₹133 ಕೋಟಿ ವಾರ್ಷಿಕ ಅನುದಾನ ನೀಡುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಸಚಿವರ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT