‘ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿಲ್ಲ’
ಬೆಂಗಳೂರು: ‘ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶವನ್ನು ಹೊಂದಿರುವ ಪಠ್ಯವನ್ನು ಶಾಲಾ ಪಠ್ಯಪುಸ್ತಕದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಂದು ಶುಕ್ರವಾರ ಹೇಳಿದರು.
‘ಕೃಷ್ಣಾ’ದಲ್ಲಿ ಮಾತನಾಡಿದ ಅವರು, ‘ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಜತೆ ಮಾತುಕತೆ ನಡೆಸಿದ್ದೇನೆ. ಅವರು ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಪಠ್ಯ ಕೈಬಿಡಲಾಗಿದೆ ಎಂಬ ವದಂತಿಗೆ ಈಡಿಗರು, ಬಿಲ್ಲವರು ಮತ್ತು ನಾರಾಯಣ ಗುರುಗಳ ಅನುಯಾಯಿಗಳು ಕಿವಿಗೊಡಬಾರದು’ ಎಂದೂ ಮನವಿ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.