ಬೆಂಗಳೂರು: ರಾಜ್ಯದ ವಿವಿಧೆಡೆ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಗೃಹ ಸಚಿವರನ್ನು ಭೇಟಿಮಾಡಿ ಈ ಸಂಬಂಧ ಅಧಿಕೃತವಾಗಿ ಮನವಿ ಪತ್ರವೊಂದನ್ನು ಸಲ್ಲಿಸಿದರು.

‘ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೇರಿಕೊಂಡು ದುರುದ್ದೇಶಪೂರ್ವಕವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಅಂತಹ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರು ಮನವಿ ಸಲ್ಲಿಸಿರುತ್ತಾರೆ. ಈ ಕಾರಣದಿಂದ ರಾಜ್ಯದ ವಿವಿಧೆಡೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.