ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಚಾರ ಸಮಿತಿ: ಮಾ.28ರಂದು ಎಂ.ಬಿ. ಪಾಟೀಲ ಅಧಿಕಾರ ಸ್ವೀಕಾರ

Last Updated 19 ಮಾರ್ಚ್ 2022, 15:28 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಮಾರ್ಚ್‌ 28ರಂದು ನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ‘ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಾರ್ಚ್‌ 28ರ ಮಧ್ಯಾಹ್ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ‍ಪದಗ್ರಹಣ ಸಮಾರಂಭ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಲವು ನಾಯಕರು ಭಾಗವಹಿಸುವರು’ ಎಂದರು.

ಎಂ.ಬಿ. ಪಾಟೀಲ ಮಾತನಾಡಿ, ‘ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ನನ್ನ ಮೇಲೆ ವಿಶ್ವಾಸವಿರಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಪಕ್ಷದ ವರ್ಚಸ್ಸು ಹೆಚ್ಚಿಸುವುದಕ್ಕೆ ಪೂರಕವಾಗಿ ಕೆಲಸ ಮಾಡುತ್ತೇನೆ’ ಎಂದರು.

ಇಲ್ಲಿನ ಜನರು ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುವುದು ನಿಶ್ಚಿತ. ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದಿರುವುದರಿಂದ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಭ್ರಮೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT