ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ

Last Updated 13 ಜುಲೈ 2022, 13:35 IST
ಅಕ್ಷರ ಗಾತ್ರ

ಬೆಳಗಾವಿ: ಕೆಪಿಸಿಸಿ ವಕ್ತಾರರಾದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಬೆಂಗಳೂರಿನಲ್ಲಿ ಬುಧವಾರ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ಬೆಳವಣಿಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಲಕ್ಷ್ಮಿ ಹೆಬ್ಬಾಳಕರ ಕುಶಲೋಪರಿ ವಿಚಾರಿಸಿದರು.

‘ಈ ಭೇಟಿಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಯಡಿಯೂರಪ್ಪ ಅವರೊಂದಿಗೆ ಯಾವುದೇ ರಾಜಕೀಯ ವಿಚಾರವನ್ನೂ ಪ್ರಸ್ತಾಪಿಸಿಲ್ಲ. ಅವರು ನಮ್ಮ ಸಮುದಾಯದ ಹಿರಿಯರು. ಹಾಗಾಗಿ ಸೌಹಾರ್ದದಿಂದ ಭೇಟಿಯಾಗಿ ಸಮಾಜದ ಬಗ್ಗೆ ಚರ್ಚಿಸಿದ್ದೇನೆ. ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡಲು ವಿಳಂಬವಾಗುತ್ತಿರುವ ವಿಚಾರದ ಬಗ್ಗೆ ಚರ್ಚಿಸಿದ್ದೇನೆ’ ಎಂದು ಲಕ್ಷ್ಮಿ ಮಾಧ್ಯಮಗಳ ಮುಂದೆ ಹೇಳಿದರು.

‘ತಾಂತ್ರಿಕ ಕಾರಣದಿಂದಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಲ್ಲಿ ವಿಳಂಬವಾಗಿದೆ. ಬೇರೆ ಸಮುದಾಯಗಳಿಗೆ ತೊಂದರೆಯಾಗದಂತೆ ನಮಗೆ ಮೀಸಲಾತಿ ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಭರವಸೆ ನೀಡಿದ್ದಾರೆ. ಶೀಘ್ರ ನಮ್ಮ ಬೇಡಿಕೆ ಈಡೇರುವ ವಿಶ್ವಾಸವಿದೆ’ ಎಂದು ತಿಳಿಸಿದರು.

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ 75 ವರ್ಷ ವಯಸ್ಸಾಗಿದೆ. ಇದು ರಾಜಕಾರಣಿಗೆ ಸಾರ್ಥಕತೆ ತರುವ ವಯಸ್ಸು. ಹಾಗಾಗಿ ನಾವೆಲ್ಲರೂ ಸೇರಿಯೇ ಸಿದ್ದರಾಮೋತ್ಸವ ಮಾಡುತ್ತಿದ್ದೇವೆ. ಆದರೆ, ‘ಶಿವಕುಮಾರೋತ್ಸವ’ ಮಾಡಿ ಎಂದು ಕೆಲವರು ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT