ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ: ಡಿಕೆ ಶಿವಕುಮಾರ್‌

ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

'ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ ಶೇ 40 ಕಮಿಷನ್‌ ಸರ್ಕಾರದಿಂದ ನಾಡಿನ ಜನತೆ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ' ಎಂದು ಡಿ.ಕೆ.ಶಿವಕುಮಾರ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

'ಸಚಿವರೊಬ್ಬರು ಶೇ 40 ಕಮಿಷನ್‌ ಕೇಳಿದ್ದಕ್ಕೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು ಶೇ 40 ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಬಿಜೆಪಿ ಪ್ರಾಯೋಜಿತ ಪಿಎಸ್‌ಐ ಹಗರಣ ಭೇದಿಸಿದ್ದರಿಂದ ಪೊಲೀಸ್‌ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಚ್‌ ಶೀಟ್‌ ಹಾಕಿಲ್ಲ' ಎಂದು ಟ್ವೀಟ್‌ ಮೂಲಕ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT