‘ಮಧ್ಯರಾತ್ರಿ ಭೇಟಿ ಸಾಬೀತು ಪಡಿಸಿ’– ಡಿ.ಕೆ. ಶಿವಕುಮಾರ್ ಸವಾಲು

ಬೆಂಗಳೂರು: ‘ಯಡಿಯೂರಪ್ಪ ಹಾಗೂ ಅವರ ಸರ್ಕಾರದ ಸಚಿವರನ್ನು ಮಧ್ಯರಾತ್ರಿ ಭೇಟಿ ಮಾಡಿ ಕೆಲಸ ಮಾಡಿಸಿಕೊಂಡಿದ್ದರೆ ಅದನ್ನು ಸಾಬೀತುಪಡಿಸಲಿ. ನಾನು ರಾಜಕಾರಣದಿಂದಲೇ ನಿವೃತ್ತಿಯಾಗುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
‘ಕಾಂಗ್ರೆಸ್ ನಾಯಕರು ಯಡಿಯೂರಪ್ಪ ಅವರನ್ನು ಆಗಾಗ ಭೇಟಿಯಾಗುತ್ತಾರೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಕೂಡ ಮುಖ್ಯಮಂತ್ರಿಯಾಗಿದ್ದವರು. ಒಂದು ದಿನವಾದರೂ ನಾನು ಯಡಿಯೂರಪ್ಪನವರನ್ನಾಗಲಿ, ಈ ಸರ್ಕಾರದ ಯಾವುದಾದರೂ ಸಚಿವರನ್ನಾಗಲಿ ಮಧ್ಯರಾತ್ರಿ ಭೇಟಿ ಮಾಡಿ ಕೆಲಸ ಮಾಡಿಸಿಕೊಂಡಿದ್ದರೆ ಅದನ್ನು ಸಾಬೀತುಪಡಿಸಲಿ’ ಎಂದರು.
ಕಾಂಗ್ರೆಸ್ ಶಾಲಿನ ಬಗ್ಗೆ ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್ ನಾಯಕರನ್ನು ದೇಶದ
ಪ್ರಧಾನಿಯನ್ನಾಗಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ಕೂಡ ಇದೇ ಶಾಲು. ಈಗ ಅವರು ಅದೇ ಶಾಲಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ' ಎಂದು ಪ್ರತಿಕ್ರಿಯಿಸಿದರು.
‘ಪಕ್ಷದ ಅಧ್ಯಕ್ಷನಾಗಿ, ಕಾರ್ಯಕರ್ತನಾಗಿ ನಮ್ಮ ಪಕ್ಷದ ತ್ರಿವರ್ಣ ಶಾಲಿನ ಬಗ್ಗೆ ಯಾರೇ ಹೀನಾಯವಾಗಿ ಮಾತನಾಡಿದಾಗ ಅದನ್ನು ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.