ಗುರುವಾರ , ಅಕ್ಟೋಬರ್ 21, 2021
24 °C

ಬಿಜೆಪಿ ನಾಯಕರ ಕಾರು ಹಾದು ಹೋಗುವಾಗ ರೆಕಾರ್ಡ್‌ ಮಾಡ್ಕೊಳ್ಳಿ: ಡಿಕೆಶಿ ಮನವಿ!

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ...’ 

ಹೀಗೆ ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಬಿಜೆಪಿಯನ್ನು ವ್ಯಂಗ್ಯವಾಡಿದ್ದಾರೆ. 

ಉತ್ತರ ಪ್ರದೇಶದ ಲಖಿಂಪುರ ಎಂಬಲ್ಲಿ ಇತ್ತೀಚೆಗೆ ಪ್ರತಿಭಟನಾ ನಿರತ ರೈತರ ಮೇಲೆ ಎಸ್‌ಯುವಿ ಹರಿದಿದ್ದು, ಘಟನೆಯಲ್ಲಿ ನಾಲ್ವರು ರೈತರು ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಎಸ್‌ಯುವಿಯನ್ನು ಬಿಜೆಪಿ ನಾಯಕ, ಕೇಂದ್ರ ಸಚಿವ  ಅಜಯ್‌ ಮಿಶ್ರಾ ಅವರ ಮಗನೇ ಚಾಲನೆ ಮಾಡುತ್ತಿದ್ದ ಎಂದು ರೈತರು ಆರೋಪಿಸಿದ್ದಾರೆ. ಆದರೆ ಅಜಯ್‌ ಮಿಶ್ರಾ ಅವರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. 

ಇದೇ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಡಿ.ಕೆ ಶಿವಕುಮಾರ್‌, ‘ಸಾರ್ವಜನಿಕರಲ್ಲಿ ಮನವಿ: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ,‘ ಎಂದು ಗೇಲಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು