ಸೋಮವಾರ, ಜುಲೈ 4, 2022
21 °C

ಸಿ.ಎಂ. ಇಬ್ರಾಹಿಂ ಭೇಟಿಯಾದ ಡಿ.ಕೆ ಶಿವಕುಮಾರ್ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಕೆಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರಿನ ಬೆನ್ಸನ್ ಟೌನ್ ನಲ್ಲಿರುವ ಇಬ್ರಾಹಿಂ ಅವರ ಮನೆಗೆ ತೆರಳಿದ ಶಿವಕುಮಾರ್, ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಇತ್ತೀಚೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. 

ಇದನ್ನೂ ಓದಿ: 

ಇಬ್ರಾಹಿಂ ಮತ್ತೆ ಜೆಡಿಎಸ್ ಸೇರಲು ಒಲವು ತೋರಿದ್ದಾರೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಸೇರುವ ಬಗ್ಗೆ ಅಂತಿಮ ತೀರ್ಮಾನ ತಿಳಿಸುವುದಾಗಿ ಇಬ್ರಾಹಿಂ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು