ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪರಿಹಾರ ವಿತರಣೆ ಕುರಿತು ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಅಧ್ಯಯನ: ಡಿಕೆಶಿ

Last Updated 10 ಸೆಪ್ಟೆಂಬರ್ 2022, 4:04 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಪ್ರವಾಹ ಸ್ಥಿತಿಗೆ ಕಾರಣವಾದ ಅಂಶಗಳು, ಸರ್ಕಾರ ಕೈಗೊಂಡಿರುವ ಕ್ರಮಗಳು, ಸಂತ್ರಸ್ತರಿಗೆ ಪರಿಹಾರ ವಿತರಣೆ ಕುರಿತು ಅಧ್ಯಯನ ನಡೆಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಪಕ್ಷದ ಹಲವು ನಾಯಕರೊಡನೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು,‘ಶಾಸಕ ಕೃಷ್ಣ ಬೈರೇಗೌಡ, ಮಾಜಿ ಮೇಯರ್‌ ಜಿ. ಪದ್ಮಾವತಿ ಸೇರಿ ಹಲವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಪ್ರವಾಹದಿಂದ ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. 15 ದಿನಗಳಲ್ಲಿ ಸಮಿತಿ ವರದಿ ಸಲ್ಲಿಸಲಿದೆ. ಬೆಂಗಳೂರಿನ ಜನರ ಅಭಿಪ್ರಾಯಕ್ಕೆ ಧ್ವನಿಯಾಗುವುದು ಈ ಅಧ್ಯಯನದ ಹಿಂದಿನ ಉದ್ದೇಶ’ ಎಂದಿದ್ದಾರೆ.

‘ಮಳೆಹಾನಿ ಕುರಿತು ಮಾಧ್ಯಮಗಳು ಮತ್ತು ಕಾಂಗ್ರೆಸ್‌ ಪಿತೂರಿ ನಡೆಸಿ ಅಪಪ್ರಚಾರ ನಡೆಸುತ್ತಿವೆ’ ಎಂಬ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ ಆರೋಪದ ಬಗ್ಗೆ ಕೇಳಿದಾಗ, ‘ನಾವು ಬೆಂಗಳೂರಿನ ಘನತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT