ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟೂರು ಕನಕಪುರ ತಾಲ್ಲೂಕಿನ ದೊಡ್ಡ ಆಲಹಳ್ಳಿಯಲ್ಲಿ ತಂದೆ ಡಿ.ಕೆ. ಕೆಂಪೇಗೌಡ ಸೇರಿದಂತೆ ಪೂರ್ವಿಕರ ಸಮಾಧಿಗಳಿಗೆ ಶನಿವಾರ ಪೂಜೆ ಸಲ್ಲಿಸಿದರು.

ಶಿವಕುಮಾರ್ ಅವರ ತಾಯಿ ಗೌರಮ್ಮ, ಪತ್ನಿ ಉಷಾ ಶಿವಕುಮಾರ್ ಪೂಜೆಯಲ್ಲಿ ಪಾಲ್ಗೊಂಡರು. ಪ್ರತಿವರ್ಷ ಗಣೇಶ ಹಬ್ಬದ ದಿನದಂದು ಪೂರ್ವಜರ ಸಮಾಧಿಗಳಿಗೆ ನಮನ ಸಲ್ಲಿಸುವುದು ಶಿವಕುಮಾರ್ ಅವರ ಕುಟುಂಬದಲ್ಲಿ ಮೊದಲಿಂದಲೂ ನಡೆದು ಬಂದಿರುವ ಸಂಪ್ರದಾಯ.

ಕಳೆದ ವರ್ಷ ಹಬ್ಬದಂದು ಇ.ಡಿ ಮತ್ತು ಐ.ಟಿ. ವಿಚಾರಣೆಯಲ್ಲಿದ್ದ ಕಾರಣ ಅವರಿಗೆ ಪೂಜೆ ಸಲ್ಲಿಸಲು ಅವಕಾಶ ದೊರೆತಿರಲಿಲ್ಲ. ಇದಕ್ಕಾಗಿ ಡಿಕೆಶಿ ಕಣ್ಣೀರು ಹಾಕಿದ್ದು ದೊಡ್ಡ ಸುದ್ದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.