ಬೆಂಗಳೂರು: ‘ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ. ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ. ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ’ ಎಂದರು.

‘ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ. ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯೇ. ಯಾವುದಾದರೂ ಆರೋಪ ಸಾಬೀತಾಗಿದೆಯಾ. ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ. ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ. ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು‘ ಎಂದು ಶಿವಕುಮಾರ್ ಪ್ರಶ್ನಿಸಿದರು.

‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ’ ಎಂದು ದೂರಿದರು.

ಅಧಿಕಾರಿಗಳ ಕಾರ್ಯ ಪ್ರಶ್ನಿಸುವುದಿಲ್ಲ: ‘ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಕೈಪಿಡಿ ನಾನು ಓದಿದ್ದೇನೆ. 48 ದಿನ ನಾನು ಈ ಕುರಿತ ಪುಸ್ತಕಗಳನ್ನು ಓದಿದ್ದೇನೆ. ಅವರಿಗೆ ಬರುವ ಮಾರ್ಗದರ್ಶನದಂತೆ ಅವರು ಕೆಲಸ ಮಾಡುತ್ತಿದ್ದಾರೆ. ಅವರನ್ನು ನಾನು ದೂರುವುದಿಲ್ಲ’ ಎಂದರು.

ಇದನ್ನೂ ಓದಿ... ಬಿಜೆಪಿ ಸರ್ಕಾರ ರಚನೆಗೆ ಕಾರಣ ಯಾರು? ರೇಣುಕಾಚಾರ್ಯ– ಎಂಟಿಬಿ ವಾಗ್ವಾದ

‘ಸಿಬಿಐ ಅಧಿಕಾರಿಗಳು 23ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಆದರೆ, 23 ರಂದು ಮಸ್ಕಿ ಪ್ರವಾಸ ಪೂರ್ವನಿಗದಿಯಾಗಿದ್ದ ಹಿನ್ನೆಲೆಯಲ್ಲಿ, 25 ರಂದು ವಿಚಾರಣೆಗೆ ಹಾಜರಾಗುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದೆ. ಇವತ್ತು ವಿಚಾರಣೆಗೆ ಹಾಜರಾಗುತ್ತಿದ್ದೇನೆ. ನಾನು ಇ.ಡಿ. ಸೇರಿದಂತೆ ಎಲ್ಲ ತನಿಖಾ ಸಂಸ್ಥೆ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದೇನೆ’ ಎಂದರು.

ಅಹ್ಮದ್ ಪಟೇಲರಿಗೆ ನನ್ನ ಮೇಲೆ ವಿಶೇಷವಾದ ನಂಬಿಕೆ ಇತ್ತು: ‘ಅಹ್ಮದ್ ಪಟೇಲ್ ಅವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪಕ್ಷಕ್ಕೆ ನಿಷ್ಠೆಯಿಂದ ಇದ್ದ ನಾಯಕರು, ರಾಜ್ಯಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ಯಾವಾಗ ಬೇಕಾದರೂ ಮಂತ್ರಿ ಆಗಬಹುದಿತ್ತು. ಆದರೆ, ಅವರು ಯಾವತ್ತೂ ಅಧಿಕಾರ ಬಯಸಲಿಲ್ಲ. ಪಕ್ಷ ಸಂಘಟನೆಯಲ್ಲೇ ಅವರು ತಮ್ಮನ್ನು ತೊಡಗಿಸಿಕೊಂಡರು. ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ನನ್ನ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸ ಇಟ್ಟಿದ್ದರು. ನನ್ನ ಕಷ್ಟದ ದಿನಗಳಲ್ಲಿ ನನ್ನ ಜತೆ ನಿಂತಿದ್ದರು’ ಎಂದರು.

‘ಅವರು ರಾಜ್ಯಸಭೆ ಚುನಾವಣೆಗೆ ನಿಂತಾಗ ಅದರ ಜವಾಬ್ದಾರಿ ಯಾರಿಗೆ ಬೇಕಾದರೂ ಕೊಡಬಹುದಿತ್ತು. ಅವರು ನನ್ನ ಮೇಲೆ ನಂಬಿಕೆ ಇಟ್ಟು ತಮ್ಮ ಶಾಸಕರನ್ನು ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದೆ. ಅವರು ಕೊಟ್ಟ ಮಾರ್ಗದರ್ಶನ, ಧೈರ್ಯವೇ ನಮಗೆ ಶಕ್ತಿ. ದೇಶದ ಉದ್ದಗಲಕ್ಕೂ ಸಾವಿರಾರು ನಾಯಕರನ್ನು ಗುರುತಿಸಿ, ಬೆಳೆಸಿ ಶಕ್ತಿ ತುಂಬಿದ ಧೀಮಂತ ನಾಯಕ ಅವರು’ ಎಂದೂ ಹೇಳಿದರು.

ಇದನ್ನೂ ಓದಿ... ರಾಜ್ಯದಲ್ಲಿ ದ್ವೇಷ ರಾಜಕಾರಣ ಮಿತಿಮೀರಿದೆ: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.