ಗುರುವಾರ , ಮಾರ್ಚ್ 30, 2023
32 °C

ಉಪಚುನಾವಣೆ ಫಲಿತಾಂಶ: ಜನ ಬದಲಾವಣೆ ಬಯಸಿರುವುದು ಸ್ಪಷ್ಟ ಎಂದ ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆ ಫಲಿತಾಂಶ ಗಮನಿಸಿದರೆ ಜನ ಬದಲಾವಣೆ ಬಯಸಿರುವುದು ಸ್ಪಷ್ಟ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ಕಾಂಗ್ರೆಸ್ ಪಕ್ಷದ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ.

ಓದಿ: 

‘ಎರಡೂ ಕ್ಷೇತ್ರಗಳ ಫಲಿತಾಂಶ ನೋಡಿದರೆ ಜನ ಬದಲಾವಣೆ ಬಯಸಿರುವುದು ಸ್ಪಷ್ಟವಾಗಿದೆ. ಮತದಾರರು ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕೊರೊನಾ ವಿಚಾರ ಮಾತ್ರವಲ್ಲ, ಯಾವುದೇ ವಿಷಯದಲ್ಲೂ ಬಿಜೆಪಿ ಸರ್ಕಾರ ಜನರಿಗೆ ಸಹಾಯ ಮಾಡಲಿಲ್ಲ. ಉಪಚುನಾವಣೆಯಲ್ಲಿ ಕೇಳಿ ಬಂದ ವೈಯಕ್ತಿಕ ಟೀಕೆಯಂತಹ ಅಭ್ಯಾಸವನ್ನು ನಾವು ತಪ್ಪಿಸಬೇಕಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ಕಾಂಗ್ರೆಸ್ ಮೇಲೆ ಜನ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಪ್ರಾಮಾಣಿಕ ಸೇವೆ ಮಾಡಲು ಪ್ರಯತ್ನ ಮಾಡುತ್ತೇವೆ. ಬಿಜೆಪಿ ಆಡಳಿತದಲ್ಲಿ ರಾಜ್ಯ 20 ವರ್ಷ ಹಿಂದೆ ಹೋಗಿದ್ದು, ಅದನ್ನು ನಾವು ಸರಿ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

ಓದಿ: 

ದೀಪಾವಳಿ ಹಬ್ಬದ ಈ ಸಮಯದಲ್ಲಿ ಶುಭ ಘಳಿಗೆಗೆ ಹೆಜ್ಜೆ ಇಡುವುದಾಗಿ ವಿಶ್ವಾಸದಿಂದ ಹೇಳುತ್ತೇವೆ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು