ಗುರುವಾರ , ಜುಲೈ 7, 2022
23 °C

ನಾವು ನಿಮ್ಮ ಜೊತೆ ಇದ್ದೇವೆ: ಸಾರಿಗೆ ನೌಕರರಿಗೆ ಡಿಕೆಶಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಾವು ನಿಮ್ಮ ಜತೆ ಇದ್ದೇವೆ’ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬ ಬೇಡಿಕೆ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಬನಶಂಕರಿ ಬಸ್ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಭೇಟಿ ಮಾಡಿದ ಶಿವಕುಮಾರ್‌, ನೌಕರರ ಅಹವಾಲು ಆಲಿಸಿದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡ ಬಾಬು ಜೊತೆ ಇದ್ದರು.

ಇದನ್ನೂ ಓದಿ... ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿ ಇಲ್ಲ: ಬಸವರಾಜ ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು