ಶುಕ್ರವಾರ, ಡಿಸೆಂಬರ್ 3, 2021
27 °C

ಕೇಂದ್ರದ ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಯಾರಿಗೂ ತಲುಪಿಲ್ಲ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಸರ್ಕಾರ ಘೋಷಿಸಿರುವ ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಯಾರಿಗೂ ತಲುಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಿಂದಗಿ, ಹಾನಗಲ್‌ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಶಿವಕುಮಾರ್, ಬಿಜೆಪಿ ಸರ್ಕಾರ ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ನೀಡಿರುವುದಾಗಿ ಘೋಷಿಸಿದೆ. ಆದರೆ, ಜನರನ್ನು ಕೇಳಿದರೆ ಯಾರೊಬ್ಬರಿಗೂ ಪರಿಹಾರ ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಂಭ್ರಮಾಚರಣೆ ಮಾಡುತ್ತಿದೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡದೆ ಸಂಭ್ರಮಾಚರಣೆ ಮಾಡುತ್ತಿರುವುದು ಖಂಡನೀಯ. ಉದ್ಯೋಗ ಕಳೆದುಕೊಂಡಿರುವವರಿಗೆ, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು. ಅದು ನಿಜವಾದ ಸಂಭ್ರಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, ದೇಶದಲ್ಲಿ ಕೋವಿಡ್ ತೀವ್ರವಾಗಿದ್ದ ಸಮಯದಲ್ಲೇ ಬಿಜೆಪಿ ಸರ್ಕಾರ ವಿದೇಶಗಳಿಗೆ ಲಸಿಕೆ ಮಾರಿಕೊಂಡಿತು. ಖಾಸಗಿ ಆಸ್ಪತ್ರೆಗಳಿಗೂ ಲಸಿಕೆ ಮಾರಾಟಕ್ಕೆ ಅವಕಾಶ ನೀಡಿತು. ನಾವು ಉಚಿತ ಲಸಿಕೆ ನೀಡಲು ಮುಂದಾದಾಗ 'ಉಚಿತ ಲಸಿಕೆ'ಯ ಘೋಷಣೆ ಮಾಡಿತು. ಲಸಿಕೆ ವಿಚಾರದಲ್ಲಿ ಇಷ್ಟೆಲ್ಲಾ ಮಾಡಿದ ಮೇಲೂ ಈ ಸಂಭ್ರಮ ಏಕೆ? ಎಂದು ಪ್ರಶ್ನಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು