ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷರ ಪದಗ್ರಹಣ 21ರಂದು

Last Updated 13 ಫೆಬ್ರುವರಿ 2021, 15:39 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ರಾಮಲಿಂಗಾರೆಡ್ಡಿ ಮತ್ತು ಮಾಜಿ ಸಂಸದ ಆರ್‌. ಧ್ರುವನಾರಾಯಣ ಅವರ ಪದಗ್ರಹಣ ಇದೇ 21ರಂದು ಬೆಳಿಗ್ಗೆ 11ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿದೆ.

ಅರಮನೆ ಮೈದಾನದ ಕಿಂಗ್ಸ್ ಕೋರ್ಟ್‌ನಲ್ಲಿ (ಗೇಟ್ ನಂ.5) ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಸಿಡಬ್ಲ್ಯುಸಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಸದರು, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರಿಗೂ ಆಹ್ವಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT