ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಷಡಕ್ಷರಿ ಸ್ವಾಮಿ ನೇಮಕ ಪ್ರಶ್ನಿಸಿದ್ದ ಪಿಐಎಲ್‌ ವಿಲೇವಾರಿ

Last Updated 24 ಜನವರಿ 2023, 22:33 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರ ನ್ನಾಗಿ ಷಡಕ್ಷರಿ ಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ 2019ರಲ್ಲಿ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ಈ ಕುರಿತಂತೆ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಷಡಕ್ಷರಿ ಸ್ವಾಮಿ ಸದ್ಯ ಕೆಪಿಎಸ್‌ಸಿ ಅಧ್ಯಕ್ಷರಾಗಿಲ್ಲ. ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲಾಗಿದೆ. ಇದರಿಂದ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ’ ಎಂದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ. ಆದರೆ, ಕೆಪಿ ಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮ ಕಾತಿಗೆ ನಿಯಮ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ 2016ರ ಜ. 21ರಂದು ಹೊರಡಿಸಿರುವ ಆದೇಶ ಜಾರಿ ಕುರಿತು ಅರ್ಜಿದಾರರು ಪರ್ಯಾಯ ಪರಿಹಾರ ಕ್ರಮ ಕೈಗೊಳ್ಳ ಬಹುದು‘ ಎಂದು ನಿರ್ದೇಶಿಸಿತು.

ಮತ್ತೊಮ್ಮೆ ನೋಟಿಸ್‌: ‘ನ್ಯಾಯಾಲ ಯದ ಆದೇಶದ ಹೊರತಾಗಿಯೂ ಶೋಧನಾ ಸಮಿತಿ ರಚನೆ ಮಾಡದೆ ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಲಾಗಿದೆ’ ಎಂದು ಆರೋಪಿಸಿ ಸಲ್ಲಿಸಿರುವ ಬೇರೊಂದು ಅರ್ಜಿಗೆ ಸಂಬಂಧಿಸಿದಂತೆ ಕೆಪಿಎಸ್‌ಸಿಗೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 20ಕ್ಕೆ ಮುಂದೂಡಿತು. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ನೇಮಿಸಿರುವ ಆದೇಶ ಪ್ರಶ್ನಿಸಿರುವ ಮತ್ತೊಂದು ಅರ್ಜಿಯನ್ನೂ ಅಂದೇ ವಿಚಾರಣೆಗೆ ನಿಗದಿಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT