ಶುಕ್ರವಾರ, ಮಾರ್ಚ್ 5, 2021
30 °C

ಪ್ರಶ್ನೆಪತ್ರಿಕೆ ಸೋರಿಕೆ: ಕೆಪಿಎಸ್‌ಸಿ ನೌಕರರು ಸಿಸಿಬಿ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ದರ್ಜೆ ಸಹಾ ಯಕರ (ಎಫ್‌ಡಿಎ) ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಕರ್ನಾ ಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಇಬ್ಬರು ನೌಕರರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಶ್ನೆಪತ್ರಿಕೆಗಳನ್ನು ಕದ್ದು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಿದ್ದರು ಎನ್ನಲಾದ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ವಿಭಾಗದ ಶೀಘ್ರ ಲಿಪಿಗಾರ್ತಿ ಸನಾ ಬೇಡಿ ಹಾಗೂ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರಮೇಶ್ ಅಲಿಯಾಸ್ ರಾಮಪ್ಪ ಹೆರಕಲ್ ಎಂಬಾತನನ್ನು ಸಿಸಿಬಿ ಪೊಲೀಸರು ಸೋಮವಾರವೇ ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದಿದ್ದ ಪೊಲೀಸರು, ಅವರಿಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಿದರು.

‘ಹಲವು ತಿಂಗಳಿನಿಂದ ಸಂಚು ರೂಪಿಸಿ ಆರೋಪಿಗಳು ಕೃತ್ಯ ಎಸಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಇನ್‌ಸ್ಪೆಕ್ಟರ್ ಚಂದ್ರು ಹಾಗೂ ಇತರರೂ ಜಾಲದಲ್ಲಿದ್ದಾರೆ. ಸರ್ಕಾರದ ದಾಖಲೆಗಳನ್ನೇ ಕದ್ದು, ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ. ಇವರ ಕೃತ್ಯದಿಂದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆರೋಪಿಗಳ ಜಾಲದಲ್ಲಿ ಮತ್ತಷ್ಟು ಮಂದಿ ಇರುವ ಶಂಕೆ ಇದೆ. ಅವರ ಪತ್ತೆಗೆ ತನಿಖೆ ಮುಂದುವರಿದಿದ್ದು, ಇಬ್ಬರೂ ನೌಕರರನ್ನು ಕಸ್ಟಡಿಗೆ ನೀಡಬೇಕು’ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯವನ್ನು ಕೋರಿದ್ದರು.

ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು ಫೆ. 2ರವರೆಗೂ ಸಿಸಿಬಿ ಕಸ್ಟಡಿಗೆ ನೀಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು