ಶುಕ್ರವಾರ, ಅಕ್ಟೋಬರ್ 30, 2020
27 °C

ಕೆಪಿಎಸ್‌ಸಿ ಪರೀಕ್ಷೆ: ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅಂಧರಿಗೆ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಿಳಿಸಿದೆ.

ರಾಷ್ಟ್ರೀಯ ಅಂಧರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

‘ಕೇಂದ್ರ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ‍ಪ್ರಕಾರ ಪರೀಕ್ಷೆಯಲ್ಲಿ ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ ನೀಡಬೇಕು. ರಾಜ್ಯ ಸರ್ಕಾರದ ನಿಯಮಗಳು 10 ನಿಮಿಷ ಸಮಯ ನೀಡಿವೆ. 682 ಅಂಧರು ಕೆಪಿಎಸ್‌ಸಿ ಪೂರ್ವಸಿದ್ಧತಾ ಪರೀಕ್ಷೆ ತೆಗೆದುಕೊಂಡಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು