ಶನಿವಾರ, ಮೇ 15, 2021
23 °C

ಏಪ್ರಿಲ್ 22– 30ರವರೆಗೆ ನಡೆಯಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಗಳು ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಏಪ್ರಿಲ್ 22ರಿಂದ 30ರವರೆಗೆ ನಡೆಯಬೇಕಿದ್ದ 2020ರ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಪರೀಕ್ಷೆಗಳನ್ನು ಬರೆಯಲು ಏಪ್ರಿಲ್ 22ರಿಂದ 28ರವರೆಗೆ ಅಭ್ಯರ್ಥಿಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕಿತ್ತು. ಏಪ್ರಿಲ್ 29 ಮತ್ತು 30ರಂದು ವಿಭಾಗೀಯ ಕೇಂದ್ರಕ್ಕೆ ಅಭ್ಯರ್ಥಿಗಳು ಹಾಜರಿಬೇಕಿತ್ತು.  

ಆದರೆ, ಕೋವಿಡ್ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರವು ಏಪ್ರಿಲ್‌ 21ರಿಂದ ಮೇ 5ರವರೆಗೆ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಿದೆ. ಹೀಗಾಗಿ, ಏಪ್ರಿಲ್ 22ರಿಂದ ಏಪ್ರಿಲ್ 30ರವರೆಗೆ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು