ಮುಂದೂಡಿದ್ದ ಎಫ್‌ಡಿಎ ಪರೀಕ್ಷೆ ಫೆ. 28ಕ್ಕೆ ನಿಗದಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ.
ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು.
ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ: ಯುವತಿ ಸೇರಿ ಇಬ್ಬರು ನೌಕರರ ಬಂಧನ
ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ವಿಭಾಗದ ಸ್ಟೆನೋಗ್ರಾಫರ್ ಸೇರಿ ಮೂವರನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ.
ಪ್ರಶ್ನೆಪತ್ರಿಕೆ ಸೋರಿಕೆ: ಕೆಪಿಎಸ್ಸಿ ಶುದ್ಧೀಕರಣಕ್ಕೆ ಇನ್ನಾದರೂ ಪಣ ತೊಡಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.