ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 50ಕ್ಕೆ ಏರಿದೆ.
ಕಲಬುರ್ಗಿ ಜಿಲ್ಲೆ ಆಳಂದ ತಾಲ್ಲೂಕಿನ ದರ್ಗಾಶಿರೂರು ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ (28) ಬಂಧಿತ. ಆರೋಪಿಯು ಪರೀಕ್ಷಾ ಕೇಂದ್ರದಲ್ಲಿ ಅಕ್ರಮಕ್ಕೆ ಬಳಸಿದ್ದ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೊಚಿಪ್, ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.