ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಟಿಸಿಎಲ್ ನೇಮಕಾತಿ | ಪರೀಕ್ಷಾ ಅಕ್ರಮ ಸಹಿಸಿಕೊಳ್ಳಲ್ಲ: ಸಚಿವ ಸುನೀಲ್ ಕುಮಾರ್

Last Updated 22 ಆಗಸ್ಟ್ 2022, 9:18 IST
ಅಕ್ಷರ ಗಾತ್ರ

ಕಲಬುರಗಿ: ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ನಮ್ಮ ಇಲಾಖೆ ನಡೆದರೂ ಪರೀಕ್ಷೆ ನಡೆಸಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ.

ಮೊದಲ ಹಂತದ ವರದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಜಿಲ್ಲಾಧಿಕಾರಿಗಳು ನಮಗೆ ಹೇಳಿದ್ದಾರೆ. ಆದಾಗ್ಯೂ ಆ ಥರದ ಘಟನಾವಳಿಗಳು ಏನಾದರೂ ನಡೆದಿದ್ದರೆ ಯಾವುದೇ ಕಾರಣಕ್ಕೂ ಅದನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಪರೀಕ್ಷೆ ಬರೆದಂತಹ ಅಭ್ಯರ್ಥಿಗಳು ಯಾರೂ ಭಯಪಡುವ ಅಗತ್ಯ ಇಲ್ಲ. ಅವರಿಗೆ ಸೂಕ್ತವಾದಂತ ನ್ಯಾಯ ಕೊಡಲಾಗುವುದು ಎಂದರು.

ಮಾಂಸ ತಿಂದು ಕೃಷ್ಣ ಮಂದಿರಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ವಿಚಾರ ಕುರಿತು ಮಾತನಾಡಿದ ಅವರು, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವುದು ತಪ್ಪು ಎಂದು ನಾನೆಲ್ಲೂ ಹೇಳುತ್ತಿಲ್ಲ. ದೇವಸ್ಥಾನಗಳಿಗೆ ಹೇಗೆ ಹೋಗಬೇಕು ಎನ್ನುವುದು ಕೆಲವರ ಭಾವನೆಗೆ ಸಂಬಂಧಪಟ್ಟದ್ದು. ಅವರವರ ಭಾವನೆಗೆ ತಕ್ಕಂತೆ ಅವರವರು ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ಯಾವ ಭಾವನೆ ಇದೆಯೋ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ ಬನ್ನಿ ಎನ್ನುವ ಕಾಂಗ್ರೆಸ್ ನಾಯಕರ ಸವಾಲು ಸ್ವೀಕರಿಸಲು ಸಿದ್ದ. ನನ್ನ ಇಲಾಖೆ ಹಾಗೂ ನಮ್ಮ ಸರ್ಕಾರದ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ. ಬಜೆಟ್ ಬಗ್ಗೆ , ಅಭಿವೃದ್ಧಿ ಬಗ್ಗೆ ಒಂದೇ ಒಂದು ದಿನವೂ ಚರ್ಚೆ ಮಾಡದ ನಿಮಗೆ ಮಾತನಾಡಲು ಏನು ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT