ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾಶದತ್ತ ಹಗರಣಗಳ ಸಂಖ್ಯೆ; ಉದ್ಯೋಗಾಕಾಂಕ್ಷಿಗಳ ಗತಿಯೇನು? -ಬಿಜೆಪಿಗೆ ಡಿಕೆಶಿ

Last Updated 22 ಆಗಸ್ಟ್ 2022, 11:04 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಟಿಸಿಎಲ್ ನೇಮಕಾತಿ ಹಗರಣ ಬಯಲಿಗೆ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದು ಸರ್ಕಾರದ ವೈಫಲ್ಯವೋ ಅಥವಾ ಹಗರಣಗಳ ಸಾಧನೆಯೋ ತಿಳಿಯುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಬಿಜೆಪಿ ಅಧಿಕಾರವಧಿಯಲ್ಲಿ ಹಗರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಉದ್ಯೋಗಾಕಾಂಕ್ಷಿಗಳ ಗತಿಯೇನು ಎಂದು ಪ್ರಶ್ನಿಸಿದ್ದಾರೆ. ಕಠಿಣ ಕ್ರಮ ಎನ್ನುವುದು ಮಾತಿಗೆ ಸೀಮಿತವಾಗಿರದೆ ಬಿಜೆಪಿ ಸರ್ಕಾರ ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಪಿಎಸ್‌ಐ ನೇಮಕಾತಿ ಹಗರಣ ಮಾಸುವ ಮುನ್ನವೇ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಹಗರಣ ಬಯಲಿಗೆ ಬಂದಿದೆ. ತಂದೆ-ಮಗ ಪರೀಕ್ಷಾ ಕೇಂದ್ರಕ್ಕೆ ಬಂದು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಸರ್ಕಾರದ ವೈಫಲ್ಯವೋ ಅಥವಾ ಹಗರಣಗಳ ಸಾಧನೆಯೋ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಹಗರಣಗಳ ಸಂಖ್ಯೆ ಆಕಾಶದತ್ತ ಮುಖ ಮಾಡುತ್ತಲೇ ಇದೆ. ಪ್ರತಿಯೊಂದು ವಿಚಾರಕ್ಕೂ 'ಕಠಿಣ ಕ್ರಮ' ಕೈಗೊಳ್ಳುವ ಸರ್ಕಾರ ಈ ವಿಚಾರಗಳಲ್ಲಿ ಮೌನವ್ರತ ಆಚರಿಸುತ್ತಿದೆಯೇ? ನಿರುದ್ಯೋಗ ಸಮಸ್ಯೆ ಎಲ್ಲರ ಊಹೆಗೂ ಮೀರಿ ಬೆಳೆಯುತ್ತಿದೆ. ಹೀಗಿದ್ದಾಗ ಇಂತಹ ಹಗರಣಗಳು ಪದೇ ಪದೇ ನಡೆಯುತ್ತಿದ್ದರೆ ಉದ್ಯೋಗಾಕಾಂಕ್ಷಿಗಳ ಗತಿಯೇನು? ಎಂದು ಕೇಳಿದರು.

ಇದನ್ನೂ ಓದಿ:

ಕಠಿಣ ಕ್ರಮ ಎನ್ನುವುದು ಬಿಜೆಪಿ ಸರ್ಕಾರದ ಮಾತಿಗೆ ಸೀಮಿತವಾಗಿರದೆ ಅದು ಅನುಷ್ಠಾನಕ್ಕೆ ಬರಬೇಕು. ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಡೆದ ಪ್ರಮಾದವನ್ನು ಸರಿ ಮಾಡುವುದಕ್ಕೆ ಬೇಕಾದ ಸೂಕ್ತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT