ಕೆಪಿಟಿಸಿಎಲ್: ಜನವರಿ ಮೊದಲ ವಾರ ಆಯ್ಕೆ ಪಟ್ಟಿ

ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಹಾಯಕ ಎಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ಈ ಹುದ್ದೆಗಳ ಆಯ್ಕೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಐದು ತಿಂಗಳ ಹಿಂದೆಯೇ ಪರೀಕ್ಷೆ ನಡೆಸಿದೆ. ಫಲಿತಾಂಶ ಪ್ರಕಟಿಸುವುದು ಹೋಗಲಿ, ಕನಿಷ್ಠ ಕೀ ಉತ್ತರವನ್ನು ಪ್ರಕಟಿಸಿಲ್ಲ ಎಂದು ಆಕ್ಷೇಪಿಸಿದರು.
ಇಂತಹ ಹುದ್ದೆಗಳಿಗೆ ನೇಮಕವಾದವರು ಆಡಳಿತ ಯಂತ್ರದ ಭಾಗವಾಗುತ್ತಾರೆ. ಕರ್ನಾಟಕದಲ್ಲಿ ಕೆಇಎ ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ಯಾವುದೇ ಪರೀಕ್ಷೆ ನಡೆಸಿದರೂ ಫಲಿತಾಂಶ ಪ್ರಕಟಿಸಲು ವಿಳಂಬ ತೋರುತ್ತಲೇ ಇದೆ. ಈ ರೀತಿ ಧೋರಣೆಯಿಂದಾಗಿ ಮುಂದೆ ಆಡಳಿತಾಂಗಕ್ಕೆ ಬರುವವರು ಆರಂಭದಲ್ಲೇ ಸಿನಿಕರಾಗುವ, ವ್ಯವಸ್ಥೆ ಬಗ್ಗೆಯೇ ಹತಾಶರಾಗುವ ಸ್ಥಿತಿ ತಲುಪುವಂತಾಗಿದೆ. ಈ ಬೆಳವಣಿಗೆ ರಾಜ್ಯಕ್ಕೆ, ಆಡಳಿತಕ್ಕೆ ಒಳಿತು ತರುವುದಿಲ್ಲ. ಕೆಇಎ, ಕೆಪಿಎಸ್‌ಸಿಯನ್ನು ಚುರುಕುಗೊಳಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.