ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಮಂಡಲದ ಪಿಎಸಿ ಅಧ್ಯಕ್ಷರಾಗಿ ಕಾಂಗ್ರೆಸ್‌ ಶಾಸಕ ಕೃಷ್ಣ ಬೈರೇಗೌಡ

ಹಿಂದೆ ಸರಿದ ರಮೇಶ್ ಕುಮಾರ್
Last Updated 1 ಜನವರಿ 2022, 16:04 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಅಧ್ಯಕ್ಷರನ್ನಾಗಿ ಕಾಂಗ್ರೆಸ್‌ ಶಾಸಕ ಕೃಷ್ಣ ಬೈರೇಗೌಡ ಅವರನ್ನು ನೇಮಿಸಿ ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌ ಅವರನ್ನು ಪಿಎಸಿ ಅಧ್ಯಕ್ಷರನ್ನಾಗಿ ನೇಮಿಸಿ ಡಿಸೆಂಬರ್‌ 27ರಂದು ಆದೇಶ ಹೊರಡಿಸಲಾಗಿತ್ತು. ಆದರೆ, ಪಿಎಸಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದ ಅವರು, ಬೇರೊಬ್ಬರನ್ನು ನೇಮಿಸುವಂತೆ ಕಾಗೇರಿ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಕೃಷ್ಣ ಬೈರೇಗೌಡ ಅವರನ್ನು ಪಿಎಸಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಬಳಿಕ ವಿಧಾನಸಭೆಯ ಅಧ್ಯಕ್ಷರು ಪರಿಷ್ಕೃತ ಆದೇಶ ಹೊರಡಿ ಸಿದ್ದಾರೆ.

ಕಾಂಗ್ರೆಸ್‌, ಬಿಜೆಪಿ ಮತ್ತು ಬಿಜೆಪಿಗೆ ಸೇರಿದ 20 ಸದಸ್ಯರು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯರಾಗಿ
ದ್ದಾರೆ. ವಿಧಾನಸಭೆಯ 16 ಮತ್ತು ವಿಧಾನ ಪರಿಷತ್‌ನ ನಾಲ್ವರು ಸದಸ್ಯರು ಸಮಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT