ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಪ್ರಮಾಣದಲ್ಲಿ ಹೆಚ್ಚಳ: ಕೃಷ್ಣಾ ತೀರದಲ್ಲಿ ಆತಂಕ ಹೆಚ್ಚಳ

Last Updated 16 ಆಗಸ್ಟ್ 2020, 10:53 IST
ಅಕ್ಷರ ಗಾತ್ರ

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಬಿರುಸಿನ ಮಳೆ ಮುಂದುವರಿದಿದ್ದು, ಅಲ್ಲಿಂದ ಕೃಷ್ಣಾ ನದಿಗೆ ಸೇರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಇದು ತೀರದ ಜನರ ಆತಂಕಕ್ಕೆ ಕಾರಣವಾಗಿದೆ.

ರಾಜಾಪುರ ಬ್ಯಾರೇಜ್‌ನಿಂದ 90ಸಾವಿರ ಕ್ಯುಸೆಕ್‌ ಹಾಗೂ ದೂಧ್‌ಗಂಗಾ ನದಿಯಿಂದ 15ಸಾವಿರ ಕ್ಯುಸೆಕ್‌ ಸೇರಿ 1.05 ಲಕ್ಷ ಕ್ಯುಸೆಕ್‌ ನೀರು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಭಾನುವಾರ ಸೇರಿಕೊಳ್ಳುತ್ತಿದೆ. ನಿಪ್ಪಾಣಿ ತಾಲ್ಲೂಕಿನ ಜತ್ರಾಟ-ಭೀವಶಿ ಸೇತುವೆ ಮುಳುಗಡೆ ಹಂತ ತಲುಪಿದೆ.

‘ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾನುವಾರ ಅಲ್ಲಿಂದ 35ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗಿದ್ದು, ಆ ರಾಜ್ಯದ ವಿವಿಧ ಜಲಾಶಯಗಳಿಂದ ಕರ್ನಾಟಕಕ್ಕೆ ಬರುತ್ತಿರುವ ನೀರಿನ ಪ್ರಮಾಣ ಮುಂದಿನ 48 ಗಂಟೆಗಳಲ್ಲಿ 2 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಲಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಮಹಾರಾಷ್ಟ್ರದಿಂದ 2 ಲಕ್ಷ ಕ್ಯುಸೆಕ್‌ ನೀರು ಕೃಷ್ಣೆಗೆ ಸೇರಿದರೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಹೆಚ್ಚಿದೆ.

ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜೋರು ಮಳೆ ಬಿದ್ದಿತು. ಸವದತ್ತಿ ತಾಲ್ಲೂಕಿನ ಮಲಪ್ರಭಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ಮುನವಳ್ಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಹಿಡಕಲ್‌ ಜಲಾಶಯದಿಂದಲೂ ಹೊರಹರಿವಿನ ಪ್ರಮಾಣ ಹೆಚ್ಚಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT