ಗುರುವಾರ , ಮೇ 26, 2022
22 °C

ಭಾಷಾ ಉನ್ನತಾಧಿಕಾರ ಸಮಿತಿಗೆ ಕೃಷ್ಣಶಾಸ್ತ್ರಿ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಎಲ್ಲ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರ ಸೋಮವಾರ (ನ.15) ರಚಿಸಿರುವ ಉನ್ನತಾಧಿಕಾರ ಸಮಿತಿಗೆ ಕನ್ನಡಿಗರಾಗಿರುವ ಸಂಸ್ಕೃತ ವಿದ್ವಾಂಸ ಚಮೂ ಕೃಷ್ಣಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆದಿಲದವರಾದ ಕೃಷ್ಣ ಶಾಸ್ತ್ರಿಗಳು ತಮಿಳುನಾಡಿನ ತಂಜಾವೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರೂ ಆಗಿರುವ ಇವರು, ಸಂಸ್ಕೃತ ಭಾರತಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸಂಸ್ಕೃತ ಸಂವರ್ಧನೆಗಾಗಿ ‘ಸಂಸ್ಕೃತ ಸಂವರ್ಧನಾ ಪ್ರತಿಷ್ಠಾನ’ ಸ್ಥಾಪಿಸಿದ್ದಾರೆ.

ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪಸಂಖ್ಯಾತ, ಬುಡಕಟ್ಟು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಅಧ್ಯಯನ ನಡೆಸಿ, ಅವುಗಳ ಉನ್ನತಿಗಾಗಿ ಕೆಲಸ ಮಾಡಲು ಉನ್ನತಾಧಿಕಾರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. 

ಈ ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಭಾಷಾಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಡೆಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾಸಂಬಂಧಿತ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆ ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು