ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನೀರು: ಸುಪ್ರೀಂಗೆ ಜಂಟಿ ಅರ್ಜಿ ಸಲ್ಲಿಸಲು ನಿರ್ಧಾರ- ಸಚಿವ ಗೋವಿಂದ ಕಾರಜೋಳ

Last Updated 5 ಆಗಸ್ಟ್ 2022, 15:42 IST
ಅಕ್ಷರ ಗಾತ್ರ

ಬೆಳಗಾವಿ: ‘ಕೃಷ್ಣಾ ಕೊಳ್ಳದ ಯೋಜನೆಯಲ್ಲಿ ಹಂಚಿಕೆಯಾದ ನೀರನ್ನು ಉಪಯೋಗ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಬೇಕು ಎಂದು ಕೋರಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳ ಜಂಟಿ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

‘ರಾಜ್ಯದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಅವಕಾಶ ಕೊಡಬೇಕು ಎಂದು ಕೋರಿ ಈ ಹಿಂದೆಯೇ ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ, ಇನ್ನೂ ಅಧಿಸೂಚನೆ ಬಂದಿಲ್ಲ. ಇನ್ನೊಮ್ಮೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಜಂಟಿ ಕೋರಿಕೆ ಸಲ್ಲಿಸಲಾಗುವುದು. ನಮ್ಮ ಕಾನೂನು ಪರಿಣತರ ತಂಡ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಲಿದೆ’ ಎಂದು ಅವರು ನಗರದಲ್ಲಿ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.

‘ಮಹದಾಯಿ ಯೋಜನೆ ಕೇವಲ ಕುಡಿಯುವ ನೀರಿಗಾಗಿ ನಿಗದಿಯಾಗಿದೆ. ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಈ ಯೋಜನೆಯಡಿ ರಾಜ್ಯಕ್ಕೆ ಕುಡಿಯುವ ನೀರಿಗಾಗಿ 3.96 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ’ ಎಂದರು.

‘ಇದರ ಯೋಜನಾ ವೆಚ್ಚ ಕಡಿಮೆ ಮಾಡಿದ್ದೇವೆ. ಪರಿಷ್ಕೃತ ಯೋಜನೆಯಲ್ಲಿ 60 ಹೆಕ್ಟೇರ್ ಅರಣ್ಯ ಮಾತ್ರ ಮುಳುಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT