ಬುಧವಾರ, ಸೆಪ್ಟೆಂಬರ್ 22, 2021
23 °C

110 ಅಡಿ ದಾಟಿದ ಕೆಆರ್‌ಎಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಭಾನುವಾರ ಸಂಜೆ ವೇಳೆಗೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.10 ಅಡಿಗೆ ತಲುಪಿದೆ.

ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, 37,048 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಕಾವೇರಿ ನೀರಾವರಿ ನಿಗಮ ಹೊರಹರಿವನ್ನು ಹೆಚ್ಚಳ ಮಾಡಿದೆ. ಸದ್ಯ 10,034 ಕ್ಯುಸೆಕ್‌ ಹೊರಹರಿವು ಇದೆ.

ರಂಗನತಿಟ್ಟು: ದೋಣಿ ವಿಹಾರ ಸ್ಥಗಿತ: (ಶ್ರೀರಂಗಪಟ್ಟಣ)- ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಕೆಆರ್‌ಎಸ್‌ ಜಲಾಶಯದ ತಗ್ಗಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ‘ಜಲಾಶಯದಿಂದ ಹೆಚ್ಚು ನೀರನ್ನು ನದಿಗೆ ಬಿಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೋಣಿ ವಿಹಾರವನ್ನು ಶುಕ್ರವಾರದಿಂದಲೇ ಸ್ಥಗಿತಗೊಳಿಸಲಾಗಿದೆ’ ಎಂದು ಪಕ್ಷಿಧಾಮದ ಆರ್‌ಎಫ್‌ಒ ಕೆ.ಸುರೇಂದ್ರ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು