ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ: ಈಶ್ವರಪ್ಪ ಸವಾಲು

Last Updated 27 ಜುಲೈ 2022, 3:00 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ನನಗೆ ಕ್ಲೀನ್ ಚಿಟ್ ನೀಡಿರುವ ವಿಷಯದ ಕುರಿತು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ವೇಳೆ ನ್ಯಾಯಾಲಯದಲ್ಲಿ ಯಶಸ್ವಿಯಾದರೆ ಅವರು ಹೇಳಿದ ಹಾಗೆ ಕೇಳಲು ನಾನು ಸಿದ್ಧನಾಗಿರುವೆ’ ಎಂದು ಹೇಳಿದರು.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಯಾರೋ ಹಾಕಿದ ಸಂದೇಶ ದಾಖಲೆಯಾಗುವುದಿಲ್ಲ. ನಾಳೆ ಇನ್ಯಾರೋ ಒಬ್ಬ ‘ನನ್ನ ಆತ್ಮಹತ್ಯೆಗೆ ಡಿಕೆಶಿಯೇ ಕಾರಣ’ ಎಂದು ಹೇಳಿದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

ಮೂವರೇ ಸಾಕು: ‘ಕಾಂಗ್ರೆಸ್‌ಗೆ ಈಗ ಯಾವ ಅಸ್ತಿತ್ವವೂ ಉಳಿದಿಲ್ಲ. ಕುತಂತ್ರದ ರಾಜಕಾರಣ ಮಾಡುತ್ತ ಬಂದಿರುವ ಕಾಂಗ್ರೆಸ್ ದೇಶ ಮತ್ತು ರಾಜ್ಯದಿಂದ ನಿರ್ನಾಮ ಆಗುವುದರಲ್ಲಿ ಯಾವ ಅನುಮಾನವೂ ಇಲ್ಲ. ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಲು ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಅಹಮ್ಮದ್ ಈ ಮೂವರೇ ಸಾಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT