ಶನಿವಾರ, ಜುಲೈ 2, 2022
25 °C

ಈಶ್ವರಪ್ಪ, ದಿವ್ಯಾ ಹಾಗರಗಿ ಹಿಂದೆ ಇರುವವರು ಯಾರು: ಸಿಎಂಗೆ ಕಾಂಗ್ರೆಸ್‌ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಮಿಷನ್ ಪ್ರಕರಣದ ಆರೋಪಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಪಿಎಸ್‌ಐ ಪರೀಕ್ಷೆ ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ. 

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ಶೇ 40 ಕಮಿಷನ್‌ ಹಗರಣದ ಆರೋಪಿ ಈಶ್ವರಪ್ಪನವರ ಬಂಧನ ಆಗಿಲ್ಲ. ಪಿಎಸ್‌ಐ ಪರೀಕ್ಷೆ ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಬಂಧನವೂ ಆಗಿಲ್ಲ. ದಿವ್ಯಾ ಹಾಗರಗಿಯನ್ನು ಹುಡುಕಲಾಗದಷ್ಟು ಪೊಲೀಸರು ಅಸಮರ್ಥರೇನಲ್ಲ’ ಎಂದು ಹೇಳಿದೆ. 

‘ಈ ಮಟ್ಟಿಗೆ ಆರೋಪಿಗಳ ರಕ್ಷಣೆಗೆ ನಿಂತಿರುವವರು ಯಾರು? ಏಕೆ? ದೊಡ್ಡವರ ಹೆಸರುಗಳು ಬಯಲಾಗುವ ಭಯವೇ? ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಉತ್ತರಿಸುವರೇ?’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು