ಶನಿವಾರ, ಜನವರಿ 29, 2022
17 °C

‌ಬಿಜೆಪಿ - ಜೆಡಿಎಸ್‌ನದ್ದು ಅಕ್ರಮ ಸಂಬಂಧ ಅಲ್ಲ: ಕೆ.ಎಸ್‌.ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ನಮ್ಮ ನಾಯಕ ಯಡಿಯೂರಪ್ಪ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಲ್ಲಿ ಪ‍್ರಾರ್ಥನೆ ಮಾಡಿಕೊಂಡಿದ್ದಾರೆ. ಇದು ಅಕ್ರಮ ಸಂಬಂಧವೂ ಅಲ್ಲ, ಒಳಒಪ್ಪಂದವೂ ಅಲ್ಲ. ಎಲ್ಲಿ ಜೆಡಿಎಸ್‌ ಸ್ಪರ್ಧಿಸಿಲ್ಲವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಬಹಿರಂಗವಾಗಿಯೇ ಸಹಕಾರ ಕೋರಿದ್ದಾರೆ’ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಇಲ್ಲಿ ಹೇಳಿದರು.

‘ಹಿಂದೆ ಬಿಜೆಪಿಯನ್ನು ಬ್ರಾಹ್ಮಣರ ಪಕ್ಷವೆಂದು ಕರೆಯುತ್ತಿದ್ದರು. ಈಗ ದಲಿತರು, ಹಿಂದುಳಿದವರು ಬಿಜೆಪಿ ಜೊತೆ ಗುರುತಿಸಿಕೊಂಡು ಕಾಂಗ್ರೆಸ್‌ ಪಕ್ಷವನ್ನು ದೂರವಿಡುತ್ತಿದ್ದಾರೆ. ಹೀಗಾಗಿ, ಎಲ್ಲಾ ಚುನಾವಣೆಗಳಲ್ಲಿ ನಾವು ಗೆಲ್ಲುತ್ತಿದ್ದೇವೆ’ ಎಂದರು.

ಓದಿ: 

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಕೇಳಿದ್ದು, ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು