ಬುಧವಾರ, ಜನವರಿ 19, 2022
18 °C

ಪೊಲೀಸರ ವಿರುದ್ಧ ಈಶ್ವರಪ್ಪ ಗರಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತಂಬಾಕು ಮಾರಾಟ ಮಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ, ಇನ್ನು ಮುಂದೆ ಪ್ರಕರಣ ದಾಖಲಿಸದಂತೆ ತಾಕೀತು ಮಾಡಿದ್ದಾರೆ.

ಶುಕ್ರವಾರ ನಗರದಲ್ಲಿ ಅಂಗಡಿ ಹಾಗೂ ಗೂಡಂಗಡಿಗಳ ಬಳಿ ಕಾರ್ಯಾ ಚರಣೆ ನಡೆಸಿದ ದೊಡ್ಡಪೇಟೆ ಠಾಣೆ ಪೊಲೀಸರು, ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ರೊಚ್ಚಿಗೆದ್ದ ಮಾಲೀಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಬಳಿ ದೂರಿದ್ದರು. ಈ ಬಗ್ಗೆ ದೊಡ್ಡಪೇಟೆ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರನ್ನು ಫೋನಿನಲ್ಲೇ ತರಾಟೆಗೆ ತೆಗೆದುಕೊಂಡ ಸಚಿವರು , ‘ಇದ್ದಕ್ಕಿದ್ದ ಹಾಗೆ ಏಕೆ ನಿಮಗೆ ಕಾಯಿಲೆ ಬಂದಿದೆ?’ ಎಂದು ಹರಿಹಾಯ್ದಿದ್ದಾರೆ.

‘ದೇಶ, ರಾಜ್ಯದಲ್ಲಿ ಇಲ್ಲದ ಕಾನೂನು ಶಿವಮೊಗ್ಗದಲ್ಲಿ ಏಕೆ? ಮಾರಾಟಗಾರರಿಗೆ ಏಕೆ ತೊಂದರೆ ಕೊಡುತ್ತೀರಿ? ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಿ’ ಎಂದು ತಾಕೀತು ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು