ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗಣಿಗಾರಿಕೆ ಇಲ್ಲ, ಅಧಿಕೃತ ನಿಲ್ಲುವುದಿಲ್ಲ: ಈಶ್ವರಪ್ಪ

Last Updated 30 ಜನವರಿ 2021, 11:15 IST
ಅಕ್ಷರ ಗಾತ್ರ

ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ ಕಲ್ಲು, ಎಂ.ಸ್ಯಾಂಡ್‌ ಅಗತ್ಯವಿದೆ. ಹಾಗಾಗಿ, ಪರವಾನಗಿ ಪಡೆದ ಕ್ರಷರ್, ಕ್ವಾರಿಗಳು ಕಾರ್ಯನಿರ್ವಹಿಸಲಿವೆ. ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಸದನದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲೂ ಅಕ್ರಮ ಕ್ವಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹೊಸದಾಗಿ ಮೂರು ಕ್ರಷರ್‌ಗಳಿಗೆ ಅನುಮತಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿವೆ. ಹೊಸದಾಗಿ ಅನುಮತಿ ನೀಡುವ ಕುರಿತು ಚರ್ಚಿಸಲಾಗುವುದು ಎಂದರು.

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಬಿಜೆಪಿ ಕಾರ್ಯಕರ್ತ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಫೆ.5ರವರೆಗೂ ವಿಧಾನ ಮಂಡಲ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕೆಲವು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಶಾಸಕರು ತಮ್ಮ ಜವಾಬ್ದಾರಿ ಅರಿತು ಮಾತನಾಡುವುದು ಒಳಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT