ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಷ್ಟು ದಲಿತರನ್ನು ಸಿಎಂ ಮಾಡಿದ್ದೀರಿ? -ಕಾಂಗ್ರೆಸ್‌ಗೆ ಸಚಿವ ಈಶ್ವರಪ್ಪ ಪ್ರಶ್ನೆ

Last Updated 23 ಜುಲೈ 2021, 14:28 IST
ಅಕ್ಷರ ಗಾತ್ರ

ಚಿತ್ರದುರ್ಗ: ಸ್ವಾತಂತ್ರ್ಯ ಸಿಕ್ಕ ಬಳಿಕ ಹಲವು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಎಷ್ಟು ಮಂದಿ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಲಿತರನ್ನು ಮುಖ್ಯಮಂತ್ರಿ ಮಾಡಲಿ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು.

‘ರಾಜ್ಯದ ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್‌ಗೆ ಈವರೆಗೆ ಸಾಧ್ಯವಾಗಿಲ್ಲ. ದಲಿತ ಸಮುದಾಯವನ್ನು ತುಳಿದಿದ್ದೇವೆ ಎಂಬುದನ್ನು ಕಾಂಗ್ರೆಸ್‌ ಒಪ್ಪಿಕೊಳ್ಳಬೇಕು. ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲು ಹಾಕುವ ನೈತಿಕತೆ ಉಳಿಸಿಕೊಂಡಿಲ್ಲ’ ಎಂದು ಕಿಡಿಕಾರಿದರು.

‘ಸಾಮಾಜಿಕ ನ್ಯಾಯದ ಸೂತ್ರದಡಿ ಧರ್ಮಸಿಂಗ್‌ ಅವರನ್ನು ಮುಖ್ಯಮಂತ್ರಿ ಮಾಡಿದರೂ ಉದ್ದಾರ ಆಗಲು ಬಿಡಲಿಲ್ಲ. ಡಾ.ಜಿ.ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಅವರೇ ಸೋಲಿಸಿದರು. ಮತ್ತೆ ಮುಂದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ’ ಎಂದು ಹೇಳಿದರು.

‘ರಾಷ್ಟ್ರಭಕ್ತಿ ಇರುವವರಿಗೆ ಬಿಜೆಪಿ ಹುದ್ದೆ ನೀಡುತ್ತದೇ ಹೊರತು ಜಾತಿ ಹುಡುಕುವುದಿಲ್ಲ. ದಲಿತ ಸಮುದಾಯದ ನಾಯಕರನ್ನು ರಾಷ್ಟ್ರಪತಿ ಮಾಡಿದ್ದೇವೆ. ಹಲವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ರಾಜ್ಯದ ರಾಜ್ಯಪಾಲರು ಕೂಡ ದಲಿತ ನಾಯಕ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT