ಸಿ.ಡಿ ಪಾಡಿ ಏನೂ ಇಲ್ಲ..: ಕೆ.ಎಸ್. ಈಶ್ವರಪ್ಪ

ಚಿಕ್ಕಮಗಳೂರು: ‘ಯಾವ ಸಿ.ಡಿ, ಪಾಡಿ ಏನೂ ಇಲ್ಲ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ನೋವಿನಿಂದ ಆ ಮಾತು ಹೇಳಿದ್ದಾರೆ. ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ,
ಸರಿಪಡಿಸುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದರು.
ನಗರದಲ್ಲಿ ಬಿಜೆಪಿ ಬುಧವಾರ ಹಮ್ಮಿಕೊಂಡಿದ್ದ ಜನಸೇವಕ ಸಮಾವೇಶದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಕಾಂಗ್ರೆಸ್, ಜೆಡಿಎಸ್‌ನಿಂದ ಬಿಜೆಪಿಗೆ ಬಂದವರನ್ನು ಸಚಿವರನ್ನಾಗಿ ಮಾಡಿದ್ದೇವೆ. ವಿಶ್ವನಾಥ್, ಮುನಿರತ್ನ ಅವರಿಬ್ಬರನ್ನು ತಾಂತ್ರಿಕ ಕಾರಣಗಳಿಂದ ಮಾಡಲು ಸಾಧ್ಯವಾಗಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.