ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷ, ‘ಸೂಪರ್ ಅಧ್ಯಕ್ಷೆ’ ಇಬ್ಬರೂ ಅಕ್ರಮಗಳ ಸರದಾರರು: ಬಿಜೆಪಿ ಆರೋಪ

Last Updated 16 ಏಪ್ರಿಲ್ 2022, 7:48 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್‌– ಬಿಜೆಪಿ ಮಧ್ಯೆ ರಾಜಕೀಯದ ಕೆಸರೆರಚಾಟಕ್ಕೆ ಕಾರಣವಾಗಿದೆ.

ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು. ‌

ಈ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಬಿಜೆಪಿ ಕಿಡಿಕಾರಿದೆ.

‘ಕೆಪಿಸಿಸಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕೆಪಿಸಿಸಿಯ ‘ಸೂಪರ್‌ ಅಧ್ಯಕ್ಷೆʼ ಇಬ್ಬರೂ ಅಕ್ರಮಗಳ ಸರದಾರರು. ಬೇನಾಮಿ ಅಧ್ಯಕ್ಷೆ ಬೇನಾಮಿ ಕಾಮಗಾರಿ ನಡೆಸುವುದರಲ್ಲೂ ಎತ್ತಿದ ಕೈ. ಕಾರ್ಯಾದೇಶ ಇಲ್ಲದ ಕಾಮಗಾರಿಗಳಿಗೆ ಕೋಟಿ ಕೋಟಿ ಸುರಿಯುವ ಧೈರ್ಯ ಖಂಡಿತವಾಗಿ ಒಬ್ಬ ಸಣ್ಣ ಗುತ್ತಿಗೆದಾರ ಮಾಡಲಾರ. ಇದರ ಹಿಂದೆ ಬೇನಾಮಿ ಅಧ್ಯಕ್ಷೆಯ ಕೈವಾಡವಿದೆ’ ಎಂದು ಬಿಜೆಪಿ ಆರೋಪಿಸಿದೆ.

ಕೆಪಿಸಿಸಿಯ ಬೇನಾಮಿ ಅಧ್ಯಕ್ಷೆಯ ಆಸ್ತಿ ಹೆಚ್ಚಳದ ಹಿಂದಿರುವ ವ್ಯಕ್ತಿ ಹಾಗೂ ಶಕ್ತಿ ಯಾರು? ಇವರ ಅಕ್ರಮದ ಆಚಾರ- ವಿಚಾರಗಳನ್ನು ಪ್ರಚಾರ ಮಾಡುವುದಕ್ಕೆ ಇದು ಸಕಾಲ. ಸಕ್ರಮ ಮಾರ್ಗದಲ್ಲಿ ಇಷ್ಟೊಂದು ಸಂಪತ್ತು ಗಳಿಸಲು ಸಾಧ್ಯವೇ ಎಂದು ಬಿಜೆಪಿ ಪ್ರಶ್ನಿಸಿದೆ.

ವೋಟು, ನೋಟಿಗಾಗಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಹೊರಟ ಬೇನಾಮಿ ಅಧ್ಯಕ್ಷೆ ಇಂದು ಮೌಲ್ಯಾಧಾರಿತ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ. ಅಕ್ರಮವನ್ನೇ ರಾಜಕಾರಣ ಎಂದುಕೊಂಡಿರುವ ಕೆಪಿಸಿಸಿಯ ಸೂಪರ್‌ ಅಧ್ಯಕ್ಷರೇ, ನಿಮ್ಮ ಅಕ್ರಮ ಆಸ್ತಿ ಲೆಕ್ಕ ಕೊಡುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ.

ಕೆಪಿಸಿಸಿ ಬೇನಾಮಿ ಅಧ್ಯಕ್ಷೆಯ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ಸಚಿವರಾಗಿದ್ದ ಅವಧಿಯಲ್ಲಿ ಭ್ರಷ್ಟಾಧ್ಯಕ್ಷ ನಡೆಸಿದ ಅವ್ಯವಹಾರಗಳ ಬಗ್ಗೆ ಬೆಳಕು ಚೆಲ್ಲಬೇಕೇ? ಬೆಳಗಾವಿಯ ‘ಲಕ್ಷ್ಮಿ’ಗೆ ಮಂಗಳೂರು, ಉತ್ತರ ಕನ್ನಡ ಹಾಗೂ ಇನ್ನಿತರ ಜಿಲ್ಲಾ ಸಹಕಾರ ಬ್ಯಾಂಕ್‌ಗಳಿಂದ ನೂರಾರು ಕೋಟಿ ಸಾಲ ಕೊಡಿಸಿದ್ದರ ಹಿಂದೆ ಭ್ರಷ್ಟಾಧ್ಯಕ್ಷನ ಕೈವಾಡ ಇಲ್ಲವೇ ಎಂದು ಬಿಜೆಪಿ ಟೀಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT