ಸೋಮವಾರ, ಸೆಪ್ಟೆಂಬರ್ 27, 2021
22 °C

ಗಣೇಶೋತ್ಸವಕ್ಕೆ ಅನುಮತಿ ಸಾಧ್ಯತೆ: ಸಚಿವ ಈಶ್ವರಪ್ಪ ಸುಳಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈ ಬಾರಿ ಕೋವಿಡ್‌ ನಿರ್ಬಂಧಗಳನ್ನು ವಿಧಿಸಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಸುಳಿವು ನೀಡಿದ್ದಾರೆ.

ಬಿಜೆಪಿ ರಾಜ್ಯ ಕಚೇರಿಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂ ಸಂಘಟನೆಗಳ ಭಾವನೆಯನ್ನು ಅರ್ಥ ಮಾಡಿಕೊಂಡು ಗಣೇಶ ಹಬ್ಬ ನಡೆಸಲು ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು.

ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕು ಎಂಬುದು ಬಹುತೇಕರ ಒತ್ತಾಯವಾಗಿದೆ. ಅವರ ಭಾವನೆಗಳಿಗೆ ಬೆಲೆ ನೀಡುವುದು ಸರ್ಕಾರದ ಕರ್ತವ್ಯ. ಆದ್ದರಿಂದ ಅನುಮತಿ ನೀಡಲಾಗುವುದು. ಹಬ್ಬದ ಆಚರಣೆ ಹೇಗಿರಬೇಕು, ಎಷ್ಟು ಜನ ಭಾಗವಹಿಸಬೇಕು, ವಿಧಿಸಬೇಕಾದ ನಿರ್ಬಂಧಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು