ಸಚಿವ ಕೆ.ಎಸ್. ಈಶ್ವರಪ್ಪಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಮವಾರ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಶೀತ ಕಾಣಿಸಿಕೊಂಡ ಕಾರಣ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದರು. ವರದಿ ಪಾಸಿಟಿವ್ ಬಂದ ತಕ್ಷಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನಗೆ ಇಂದು ಕೊರೊನಾ ಸೋಂಕು ದೃಡಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಭಾನುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.