ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದಾಯಕ್ಕೆ ಸಿದ್ದರಾಮಯ್ಯರ ನಿರೀಕ್ಷೆ ಇತ್ತು: ಈಶ್ವರಪ್ಪ

Last Updated 8 ಫೆಬ್ರುವರಿ 2021, 15:27 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟದಲ್ಲಿ ಸಿದ್ದರಾಮಯ್ಯ ಅವರೂ ಭಾಗವಹಿಸಬೇಕು ಎನ್ನುವುದು ಸಮುದಾಯದ ಜನರ ಅಪೇಕ್ಷೆಯಾಗಿತ್ತು’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಸಮಾವೇಶ ಯಶಸ್ವಿಯಾಗಿದೆ. ಕುರುಬ ಸಮುದಾಯದ ಇತಿಹಾಸದಲ್ಲಿಯೇ ದೊಡ್ಡ ಸಮಾವೇಶ. ಸಮಾವೇಶಕ್ಕೆ ನಾನು ಅಥವಾ ಪಕ್ಷ ಹಣ ಕೊಟ್ಟಿಲ್ಲ. ಜನರೇ ಸ್ವಯಂಪ್ರೇರಿತರಾಗಿ ಬಂದಿದ್ದರು. ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸಿದ್ದರು. ಸಮುದಾಯ ಸಿದ್ದರಾಮಯ್ಯ ಅವರನ್ನು ಸಿ.ಎಂ ಮಾಡಿದೆ. ಹಾಗಾಗಿ, ಜನರು ಅವರ ಉಪಸ್ಥಿತಿ ಅಪೇಕ್ಷಿಸಿದ್ದರು’ ಎಂದರು.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕುರುಬ ಸಮುದಾಯಕ್ಕೆ ಅನುದಾನ ನೀಡಿದ್ದಾರೆ. ಕನಕ ಜಯಂತಿಗೆ ರಜೆ ನೀಡಿದ್ದಾರೆ. ಎಸ್‌ಟಿ ಮೀಸಲಾತಿ ನೀಡುವುದು ಬಾಕಿ ಇದೆ. ಮುಂದಿನ ಹಂತದಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿ ಜತೆ ಮೀಸಲಾತಿ ಹೋರಾಟ ಸಮಿತಿ ಚರ್ಚಿಸಲಿದೆ. ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ, ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು. ಪ್ರಧಾನಿ, ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT