ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಲ್ಲಿರುವ ದೊಡ್ಡ ಪೆದ್ದ ಈಶ್ವರಪ್ಪ: ಸಿದ್ದರಾಮಯ್ಯ ಟೀಕೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ
Last Updated 28 ನವೆಂಬರ್ 2021, 14:02 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಚಿವ ಕೆ.ಎಸ್‌.ಈಶ್ವರಪ್ಪ ಬಿಜೆಪಿಯಲ್ಲಿರುವ ಒಬ್ಬ ಪೆದ್ದ. ರಾಜಕೀಯ ಗಂಧಗಾಳಿ ಗೊತ್ತಿಲ್ಲದೇ ಮಂತ್ರಿ ಆಗಿರುವ ಏಕಮಾತ್ರ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಬಿ.ಸೋಮಶೇಖರ ಪರ ಭಾನುವಾರ ಮತಯಾಚನೆ ಮಾಡಿ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು

‘ಕಾಂಗ್ರೆಸ್‌ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಮಾತನಾಡಲು ಈಶ್ವರಪ್ಪ ಯಾರು? ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನಿಮ್ಮ ಕೆಲಸವನ್ನು ನೀವು ನೋಡಿಕೊಳ್ಳಿ. ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಹಗುರವಾಗಿ ಮಾತನಾಡಬೇಡಿ’ ಎಂದು ಎಚ್ಚರಿಕೆ ನೀಡಿದರು.

‘ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ತಂದು ಮಹಿಳೆಯರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂವಿಧಾನಬದ್ಧ ಮೀಸಲಾತಿ ದೊರಕಿಸಿಕೊಟ್ಟಿದ್ದು ರಾಜೀವ್‌ಗಾಂಧಿ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೀಸಲಾತಿಯನ್ನು ಪ್ರತಿ ವರ್ಷ ಬದಲಿಸಿ ಅಧಿಕಾರಕ್ಕೆ ತೊಡಕುಂಟು ಮಾಡಿದ್ದು ಬಿಜೆಪಿ. ಇದು ನಿಮಗೆ ಗೊತ್ತೇ ಈಶ್ವರಪ್ಪ’ ಎಂದು ಏಕವಚನದಲ್ಲಿ ಪ್ರಶ್ನಿಸಿದರು.

‘ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ ಪಡೆಯುವ ಸರ್ಕಾರ ರಾಜ್ಯದಲ್ಲಿದೆ. ರಾಜ್ಯ ಗುತ್ತಿಗೆದಾರರ ಸಂಘ ಪ್ರಧಾನಿಗೆ ದೂರು ನೀಡಿರುವ ಕುರಿತು ‘ಪ್ರಜಾವಾಣಿ’ ವರದಿ ಮಾಡಿದೆ. ವಿಧಾನಸೌಧದಲ್ಲಿ ಲಂಚದ ದುರ್ವಾಸನೆ ಬರುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರು ಈವರೆಗೆ ಕಂಡಿಲ್ಲ’ ಎಂದು ಕುಟುಕಿದರು.

‘ಕಟೀಲ್‌ ಒಬ್ಬ ಭಯೋತ್ಪಾದಕ’

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲ. ಅವರೇ ಒಬ್ಬ ಭಯೋತ್ಪಾದಕ ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

‘ಭಯೋತ್ಪಾದನೆಗೆ ಕಾಂಗ್ರೆಸ್‌ ಬಡ್ತಿ ನೀಡುತ್ತಿದೆ’ ಎಂಬ ಕಟೀಲ್‌ ಹೇಳಿಕೆಗೆ ಅವರು ತಿರುಗೇಟು ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿ, ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅಸಂಬದ್ಧ ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನಗತ್ಯ ಗೊಂದಲ ಸೃಷ್ಟಿಸುವ ಅನೇಕರು ಬಿಜೆಪಿಯಲ್ಲಿ ಇದ್ದಾರೆ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT