ಶುಕ್ರವಾರ, ಮೇ 27, 2022
23 °C

ಲೀಲಾವತಿಗೆ ‘ಕೆಎಸ್‌ನ ಕಾವ್ಯ ಗಾಯನ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಎಚ್.ಆರ್.ಲೀಲಾವತಿ ಅವರನ್ನು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕೆ.ಎಸ್‌.ನರಸಿಂಹಸ್ವಾಮಿ ಕಾವ್ಯಗಾಯನ ಪ್ರಶಸ್ತಿ–2020’ಕ್ಕೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಡಿ.27ರಂದು ಸಂಜೆ 5.30ಕ್ಕೆ ಕಲಾಮಂದಿರದ ಕಿರುರಂಗಮಂದಿರದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತೆ ಬಿ.ಆರ್.ಪೂರ್ಣಿಮಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಟ್ರಸ್ಟ್‌ನ ಸದಸ್ಯ ಸಂಚಾಲಕ ಕೆ.ಜೆ.ನಾರಾಯಣ ಕಿಕ್ಕೇರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು