ಮಂಗಳವಾರ, ಮಾರ್ಚ್ 28, 2023
30 °C

ಪ್ರಜಾವಾಣಿ ವರದಿ ಫಲಶ್ರುತಿ: ಜುಲೈ 25ಕ್ಕೆ ಕೆ-ಸೆಟ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್‌) ಮೈಸೂರು ವಿಶ್ವವಿದ್ಯಾನಿಲಯವು ಜುಲೈ 25ಕ್ಕೆ ಮರುನಿಗದಿ ಮಾಡಿದೆ. ಕೋವಿಡ್‌ ಲಾಕ್‌ಡೌನ್‌ನಿಂದ ಪರೀಕ್ಷೆಯನ್ನು ಎರಡು ಬಾರಿ ಮುಂದೂಡಲಾಗಿತ್ತು.

ಸುಮಾರು 85 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಮೂರು ತಿಂಗಳಾಗಿದ್ದು, ಪರೀಕ್ಷೆ ದಿನಾಂಕ ಪ್ರಕಟಣೆಗೆ ಕಾಯುತ್ತಿದ್ದರು. ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ಕೆ–ಸೆಟ್‌ ಪರೀಕ್ಷೆ: ದಿನ ನಿಗದಿಗೆ ಪರದಾಟ’ ಎಂಬ ವಿಶೇಷ ವರದಿ ಪ್ರಕಟವಾಗಿತ್ತು.

‘25ರಂದು ಬೇರಾವುದೇ ಪರೀಕ್ಷೆ ಇಲ್ಲ. ಹೀಗಾಗಿ, ಆ ದಿನ ಅಂತಿಮಗೊಳಿಸಿದ್ದೇವೆ. ಕೋವಿಡ್‌–19 ಮಾರ್ಗಸೂಚಿ ಪ್ರಕಾರವೇ ಪರೀಕ್ಷೆ ನಡೆಸುತ್ತೇವೆ’ ಎಂದು ಕೆ–ಸೆಟ್‌ ಸಂಯೋಜಕ ಪ್ರೊ.ಎಚ್.ರಾಜಶೇಖರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿರುವ ನೋಡೆಲ್‌ ಕೇಂದ್ರಗಳಲ್ಲಿ 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ http://kset.uni-mysore.ac.in.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು