ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಮುಷ್ಕರ: ಕೆ–ಸೆಟ್‌ ಪರೀಕ್ಷೆ ಮುಂದೂಡಿಕೆ

Last Updated 10 ಏಪ್ರಿಲ್ 2021, 10:02 IST
ಅಕ್ಷರ ಗಾತ್ರ

ಮೈಸೂರು: ಭಾನುವಾರ (ಏಪ್ರಿಲ್‌ 11) ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್‌) ಮುಂದೂಡಲಾಗಿದೆ.

’ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿತ್ತು. ಆದರೆ ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಕೆ–ಸೆಟ್‌ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು’ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ–ಸೆಟ್ ಸಂಯೋಜನಾಧಿಕಾರಿ ಪ್ರೊ.ಎಚ್.ರಾಜಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಕಾರಣ ಕೆ–ಸೆಟ್‌ ಪರೀಕ್ಷೆ ಮುಂದೂಡುವಂತೆ ಕೆಲವು ಅಭ್ಯರ್ಥಿಗಳು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT