ಶುಕ್ರವಾರ, ಅಕ್ಟೋಬರ್ 29, 2021
20 °C

ಏಳನೇ ವೇತನ ಆಯೋಗಕ್ಕೆ ಆಗ್ರಹಿಸಿ ಹೋರಾಟ: ಸರ್ಕಾರಿ ನೌಕರರ ಸಂಘ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗವನ್ನು ತ್ವರಿತವಾಗಿ ರಚಿಸುವಂತೆ ಆಗ್ರಹಿಸಿ ಹೋರಾಟ ಕೈಗೆತ್ತಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.

ಭಾನುವಾರ ನಡೆದ ಸಂಘದ ರಾಜ್ಯ ಪರಿಷತ್‌ ಮಹಾಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಹಳೆಯ ಪಿಂಚಣಿ ಯೋಜನೆಯ ಮರು ಜಾರಿ, ಖಾಲಿ ಇರುವ 2.63 ಲಕ್ಷ ಹುದ್ದೆಗಳ ಭರ್ತಿ, ಶಿಕ್ಷಕರ ವರ್ಗಾವಣೆಗೆ ಕಾಯ್ದೆ ಜಾರಿ, ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಸೇರಿದಂತೆ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೂರು ಹಂತದ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು. ಡಿಸೆಂಬರ್‌ನಲ್ಲಿ ಮನವಿ ತಹಶೀಲ್ದಾರ್‌ಗಳ ಮೂಲಕ ಮನವಿ ಸಲ್ಲಿಸಲಾಗುವುದು. 2022ರ ಜನವರಿಯಲ್ಲಿ ಮೂರು ದಿನಗಳ ಕಾಲ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ, ನಂತರವೂ ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.