ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಕ್ತ ವಿ.ವಿ: 2023ಕ್ಕೆ 1 ಲಕ್ಷ ವಿದ್ಯಾರ್ಥಿಗಳ ಪ್ರವೇಶ ಗುರಿ’

Last Updated 19 ಜನವರಿ 2021, 1:12 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) 2023ನೇ ಸಾಲಿಗೆ 1 ಲಕ್ಷ ವಿದ್ಯಾರ್ಥಿಗಳ ಪ್ರವೇಶ ಗುರಿಹೊಂದಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಕೆಎಸ್‌ಒಯುನಲ್ಲಿ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ಮೂಲಕ ಬೆಂಗಳೂರಿನಿಂದ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಪ್ರಸಕ್ತ ಸಾಲಿನಲ್ಲಿ 17,244 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 2022ಕ್ಕೆ ಸಾಲಿನಿಂದ ಈ ಸಂಖ್ಯೆ 50 ಸಾವಿರ ಹಾಗೂ ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇರಬೇಕು’ ಎಂದು ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.

‘ದೂರ ಶಿಕ್ಷಣವನ್ನು ಕೆಎಸ್‌ಒಯು ಮಾತ್ರ ನೀಡಬೇಕೆಂಬ ಕಾಯ್ದೆ ತರಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ ಮೇಲೆ ದೂರಶಿಕ್ಷಣಕ್ಕೆ ಯಾವುದೇ ಗಡಿಗಳು ಇರುವುದಿಲ್ಲ. ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಬೆಳೆಯಲು ಅವಕಾಶವಿದೆ. ಈಗಾಗಲೇ ಈ ಶಿಕ್ಷಣ ಕಾಟಾಚಾರಕ್ಕಲ್ಲ, ಗಂಭೀರವಾಗಿ ಕಲಿಯಬೇಕು. ಯಾವ ಉದ್ದೇಶಕ್ಕಾಗಿ ಈ ವಿಶ್ವವಿದ್ಯಾಲಯ ಸ್ಥಾಪನೆ ಆಗಿತ್ತೊ ಅದೇ ದಿಕ್ಕಿನಲ್ಲಿ ಮುನ್ನಡೆಸಲಾಗುವುದು. ಅದಕ್ಕಾಗಿ ಸರ್ಕಾರ ಎಲ್ಲ ಸಹಕಾರ ನೀಡಲಿದೆ’ ಎಂದರು.

‘ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ವ್ಯಾಪಕವಾದ ಪ್ರಚಾರ ಕೈಗೊಳ್ಳಬೇಕು. ಸಾಧ್ಯವಾದರೆ ತಾರಾ ಪ್ರಚಾರಕರಿಂದ ದೃಶ್ಯ ರೂಪದ ಜಾಹೀರಾತು ಸಿದ್ಧಪಡಿಸಿ ಪ್ರಚಾರ ಮಾಡಿ, ವಿಶೇಷ ಅಭಿಯಾನ ಮಾಡಿ. ಆ ಮೂಲಕ,ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೂಒಳ್ಳೆಯ ಶೈಕ್ಷಣಿಕ ಬ್ರ್ಯಾಂಡ್‌ ಆಗಿ ಹೊರಹೊಮ್ಮಲಿ. ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಇತರೆ ವಿಶ್ವವಿದ್ಯಾಲಯಗಳು, ಜಿಟಿಟಿಸಿ ಮುಂತಾದ ಶೈಕ್ಷಣಿಕ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಿ’ ಎಂದು ಅಶ್ವತ್ಥನಾರಾಯಣ ಸಲಹೆ ಮಾಡಿದರು.

ಕುಲಸಚಿವ ಡಾ.ಲಿಂಗರಾಜ ಗಾಂಧಿ, ಮೌಲ್ಯಮಾಪನ ಕುಲಸಚಿವ ಅಶೋಕ ಕಾಂಬ್ಳೆ, ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಮೈಸೂರಿನಿಂದಲೇ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT