ಶುಕ್ರವಾರ, ಮೇ 27, 2022
30 °C

ಮಾಲಿನ್ಯ ನಿಯಂತ್ರಣ ಮಂಡಳಿ: ಶಾಂತ್‌ ಅವ್ವೇರಹಳ್ಳಿ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ನಗರದ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿ ಡಾ. ಶಾಂತ್‌ ಅವ್ವೇರಹಳ್ಳಿ ತಿಮ್ಮಯ್ಯ ಅವರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಮೆಟಾಮಾರ್ಫೋಸಿಸ್‌ ಪ್ರಾಜೆಕ್ಟ್ಸ್‌ ಕನ್ಸಲ್ಟೆಂಟ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶಾಂತ್‌ ಅವ್ವೇರಹಳ್ಳಿ ಎಂಜಿನಿಯರಿಂಗ್‌
ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದು, ಪಿಎಚ್‌.ಡಿ ಪಡೆದಿದ್ದಾರೆ. ಮೂರು ವರ್ಷಗಳ ಅವಧಿಗೆ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಬಾಕಿ ಇರುವ ಆರು ರಿಟ್‌ ಅರ್ಜಿಗಳ ವಿಚಾರಣೆಯ ಬಳಿಕ ಹೊರಬೀಳುವ ತೀರ್ಪಿನ ವ್ಯಾಪ್ತಿಗೆ ಈ ನೇಮಕಾತಿ ಒಳಪಟ್ಟಿರುತ್ತದೆ ಎಂದು ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಆದೇಶದಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.