ಶುಕ್ರವಾರ, ಅಕ್ಟೋಬರ್ 30, 2020
28 °C

ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾರಾಷ್ಟ್ರಕ್ಕೆ ಲಾಕ್‌ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಇದೇ 22ರಿಂದ ಪುನರ್ ಆರಂಭಿಸಲು ನಿಗಮ ನಿರ್ಧರಿಸಿದೆ.

ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ ಎಂದು ನಿಗಮ ತಿಳಿಸಿದೆ.

‘ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ (www.ksrtc.in) ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸಬಹುದು. ನಿಗಮದ ಮತ್ತು ಫ್ರಾಂಚೈಸಿ ಕೌಂಟರ್‌ಗಳಲ್ಲೂ ಆಸನಗಳನ್ನು ಕಾಯ್ದಿರಿಸಬಹುದು’ ಎಂದು ವಿವರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.